DCP Electronic City BCP (@DCP_ECITY) header
DCP Electronic City BCP (@DCP_ECITY) profile picture

Official Page of DCP Electronic City BCP. Public safety, Crime prevention alerts, Cyber Fraud alerts, Public and Police Community Building.

Electronic City
Joined September 2025
ರಾಷ್ಟ್ರೀಯ ಪತ್ರಿಕಾ ದಿನದ ಹಾರ್ದಿಕ ಶುಭಾಶಯಗಳು ಸತ್ಯದ ಅನಾವರಣ, ಸಮಾಜದ ಧ್ವನಿ ಹಾಗೂ ಪ್ರಜಾಪ್ರಭುತ್ವದ ಬಲವರ್ಧನೆಯಲ್ಲಿ ಪತ್ರಿಕಾ ಮಾಧ್ಯಮದ ಪಾತ್ರ ಅನನ್ಯ. ನಿಷ್ಪಕ್ಷಪಾತ ವರದಿ, ಜವಾಬ್ದಾರಿಯುತ ಪತ್ರಿಕೋದ್ಯಮ ಮತ್ತು ಜನಜಾಗೃತಿಯ ಮೂಲಕ ಸಮಾಜಕ್ಕೆ ದಾರಿದೀಪವಾಗಿರುವ ಎಲ್ಲಾ ಪತ್ರಕರ್ತರಿಗೆ ಹೃತ್ಪೂರ್ವಕ ಅಭಿನಂದನೆಗಳು.
43
ಮಕ್ಕಳೇ ನಮ್ಮ ದೇಶದ ಭವಿಷ್ಯ ಹಾಗೂ ನಾಳಿನ ಭರವಸೆಯ ಬೆಳಕು. ಪ್ರತಿಯೊಂದು ಮಗುವಿಗೂ ಪ್ರೀತಿ, ಶಿಕ್ಷಣ, ಸುರಕ್ಷತೆ ಮತ್ತು ಉತ್ತಮ ಭವಿಷ್ಯವನ್ನು ಒದಗಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ. ಮಕ್ಕಳ ಕನಸುಗಳಿಗೆ ಪ್ರೋತ್ಸಾಹ ನೀಡಿ, ಅವರ ಪ್ರತಿಭೆಯನ್ನು ಗುರುತಿಸಿ, ಸುರಕ್ಷಿತ ಹಾಗೂ ಸುಂದರ ಸಮಾಜವನ್ನು ನಿರ್ಮಿಸೋಣ. ಎಲ್ಲಾ ಮುದ್ದು ಮಕ್ಕಳಿಗೆ ಮಕ್ಕಳ ದಿನಾಚರಣೆಯ ಹಾರ್ದಿಕ ಶುಭಾಶಯಗಳು. 💐 ಮಕ್ಕಳ ಸುರಕ್ಷತೆ ನಮ್ಮೆಲ್ಲರ ಹೊಣೆಗಾರಿಕೆ. ❤️
1
50
ಎಲೆಕ್ಟ್ರಾನಿಕ್ ಸಿಟಿ ವಿಭಾಗದ ಬೇಗೂರು ಪೊಲೀಸ್ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್ ಶ್ರೀ ಸಂದೀಪ್ ರವರ ನೇತೃತ್ವದ ತಂಡವು ಯಶಸ್ವಿ ಕಾರ್ಯಾಚರಣೆ ನಡೆಸಿ, ನಿಷೇಧಿತ ಮಾದಕವಸ್ತು ಜಾಲವನ್ನು ಪತ್ತೆಹಚ್ಚಿ, ಅಂದಾಜು ₹6.80 ಲಕ್ಷ ಮೌಲ್ಯದ 13 ಕೆ.ಜಿ. 750 ಗ್ರಾಂ ಮಾದಕವಸ್ತುವನ್ನು ವಶಪಡಿಸಿಕೊಂಡಿರುತ್ತಾರೆ. ಮಾದಕವಸ್ತು ಮುಕ್ತ ಕರ್ನಾಟಕ ನಿರ್ಮಾಣದ ಸಂಕಲ್ಪದೊಂದಿಗೆ ಮಾದಕವಸ್ತುಗಳ ವಿರುದ್ಧದ ಕಾರ್ಯಾಚರಣೆ ಮುಂದುವರಿದಿದೆ. ಈ ಕಾರ್ಯಾಚರಣೆಯಲ್ಲಿ ಶ್ರಮಿಸಿದ ಪೊಲೀಸ್ ಇನ್ಸ್‌ಪೆಕ್ಟರ್ ಹಾಗೂ ತಂಡದ ಅಧಿಕಾರಿ ಮತ್ತು ಸಿಬ್ಬಂದಿಯ ಕಾರ್ಯವನ್ನು ಶ್ಲಾಘಿಸಲಾಗಿದೆ.
1
89
ಎಲೆಕ್ಟ್ರಾನಿಕ್ ಸಿಟಿ ವಿಭಾಗದ ಹುಳಿಮಾವು ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ವಂಚನೆ ಪ್ರಕರಣ (CR.No. 358/2026, ಕಲಂ 318(4), 351(2), 352 ಜೊತೆಗೆ 3(5) BNS) ಸಂಬಂಧಿಸಿದಂತೆ, ಉಪ ಪೊಲೀಸ್ ಆಯುಕ್ತರಾದ ಶ್ರೀ ಎಂ. ನಾರಾಯಣ IPS ರವರ ಮಾರ್ಗದರ್ಶನದಲ್ಲಿ ಹಾಗೂ ಸಹಾಯಕ ಪೊಲೀಸ್ ಆಯುಕ್ತರಾದ ಶ್ರೀ ಸತೀಶ್ ಕೆ.ಎಲ್. ರವರ ನೇತೃತ್ವದಲ್ಲಿ, ಪೊಲೀಸ್ ಇನ್ಸ್‌ಪೆಕ್ಟರ್ ಮತ್ತು ತಂಡವು ಯಶಸ್ವಿ ಕಾರ್ಯಾಚರಣೆ ನಡೆಸಿ, ಅಂದಾಜು ₹1.20 ಕೋಟಿ ಮೌಲ್ಯದ ಒಟ್ಟು 20 ಕಾರುಗಳನ್ನು ವಶಪಡಿಸಿಕೊಂಡಿರುತ್ತಾರೆ. ಈ ಕಾರ್ಯಾಚರಣೆಯಲ್ಲಿ ಶ್ರಮಿಸಿದ ಪೊಲೀಸ್ ಇನ್ಸ್‌ಪೆಕ್ಟರ್ ಹಾಗೂ ತಂಡದ ಅಧಿಕಾರಿಗಳು ಮತ್ತು ಸಿಬ್ಬಂದಿಯ ಕಾರ್ಯವನ್ನು ಶ್ಲಾಘಿಸಲಾಗಿದೆ.
71
M ನಾರಾಯಣ IPS ಉಪ ಪೊಲೀಸ್ ಆಯುಕ್ತರು, ಎಲೆಕ್ಟ್ರಾನಿಕ್ ಸಿಟಿ ವಿಭಾಗ ಹಾಗೂ ಸತೀಶ್ K.L ಸಹಾಯಕ ಪೊಲೀಸ್ ಆಯುಕ್ತರು, ಎಲೆಕ್ಟ್ರಾನಿಕ್ ಸಿಟಿ ಉಪವಿಭಾಗ ಇವರ ಮಾರ್ಗದರ್ಶನದಲ್ಲಿ, ಬಂಡೇಪಾಳ್ಯ ಪೊಲೀಸ್ ಠಾಣೆಯ ಮೊ.ಸಂ. 216/2026 NDPS ಪ್ರಕರಣದಲ್ಲಿ ಸುಮಾರು ₹3 ಲಕ್ಷ ಮೌಲ್ಯದ 6 ಕೆ.ಜಿ. ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ. ವಿವಿಧ ಅಪರಾಧ ಪ್ರಕರಣಗಳನ್ನು ತ್ವರಿತವಾಗಿ ಪತ್ತೆಹಚ್ಚಿದ ಉತ್ತಮ ಕಾರ್ಯಕ್ಕಾಗಿ ಇಂದು ಮಾನ್ಯ ಪೊಲೀಸ್ ಆಯುಕ್ತರು, ಬೆಂಗಳೂರು ನಗರ ರವರು ಪತ್ರಿಕಾಗೋಷ್ಠಿಯಲ್ಲಿ ಬಂಡೇಪಾಳ್ಯ ಪೊಲೀಸ್ ಇನ್ಸ್‌ಪೆಕ್ಟರ್ ಹಾಗೂ ಸಿಬ್ಬಂದಿಯವರ ಕಾರ್ಯವನ್ನು ಶ್ಲಾಘಿಸಿ ಪ್ರಶಂಸಿಸಿದ್ದಾರೆ. ಬಂಡೇಪಾಳ್ಯ ಪೊಲೀಸ್ ತಂಡಕ್ಕೆ ಅಭಿನಂದನೆಗಳು
91
ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣೆಯ ಮನೆ ಕಳವು ಪ್ರಕರಣ ಸಂಖ್ಯೆ 310/2026ಕ್ಕೆ ಸಂಬಂಧಿಸಿದಂತೆ, ಸುಮಾರು ₹66,84,949/- ಮೌಲ್ಯದ 461 ಗ್ರಾಂ ಚಿನ್ನಾಭರಣಗಳನ್ನು ಯಶಸ್ವಿಯಾಗಿ ವಶಪಡಿಸಿಕೊಳ್ಳಲಾಗಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಅಜರುದ್ದೀನ್ ಅವರ ನೇತೃತ್ವದ ತಂಡವು ಕಾರ್ಯಾಚರಣೆ ನಡೆಸಿ ಪ್ರಕರಣವನ್ನು ಯಶಸ್ವಿಯಾಗಿ ಭೇದಿಸಿ, ಕಳುವಾಗಿದ್ದ ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ. ಕಾರ್ಯಾಚರಣೆಯಲ್ಲಿ ಉತ್ತಮ ಕಾರ್ಯನಿರ್ವಹಿಸಿದ ಪೊಲೀಸ್ ಇನ್ಸ್‌ಪೆಕ್ಟರ್ ಹಾಗೂ ತಂಡದ ಅಧಿಕಾರಿ ಮತ್ತು ಸಿಬ್ಬಂದಿಯವರಿಗೆ ಅಭಿನಂದನೆಗಳು.
73
ಹೆಬ್ಬಗೋಡಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ AISLE ಡೇಟಿಂಗ್ ಆ್ಯಪ್ ಮೂಲಕ ಯುವಕರನ್ನು ಪರಿಚಯಿಸಿಕೊಂಡು, ಭೇಟಿಯಾಗುವ ನೆಪದಲ್ಲಿ ಅಪಹರಿಸಿ ಹಣ ಸುಲಿಗೆ ಮಾಡುತ್ತಿದ್ದ ಗ್ಯಾಂಗ್ ಅನ್ನು ಪತ್ತೆಹಚ್ಚಿ ಒಟ್ಟು 4 ಆರೋಪಿಗಳನ್ನು ಬಂಧಿಸಲಾಗಿದೆ. ಆರೋಪಿಗಳಿಂದ ₹46,600 ನಗದು ಹಾಗೂ ಕೃತ್ಯಕ್ಕೆ ಬಳಸಿದ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಆರೋಪಿಗಳ ಬ್ಯಾಂಕ್ ಖಾತೆಯಲ್ಲಿದ್ದ ₹3,21,000 ಹಣವನ್ನು ಫ್ರೀಜ್ ಮಾಡಲಾಗಿದೆ. ಈ ಪ್ರಕರಣವನ್ನು ಯಶಸ್ವಿಯಾಗಿ ಪತ್ತೆಹಚ್ಚಿದ ಹೆಬ್ಬಗೋಡಿ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್ ಹಾಗೂ ಅವರ ತಂಡದ ಕಾರ್ಯಕ್ಕೆ ಅಭಿನಂದನೆಗಳು.
2
4
339
ಎಲೆಕ್ಟ್ರಾನಿಕ್ ಸಿಟಿ ವಿಭಾಗದ ಡಿಸಿಪಿ ಎಂ. ನಾರಾಯಣ, ಐಪಿಎಸ್ ಅವರ ಮಾರ್ಗದರ್ಶನದಲ್ಲಿ ಹಾಗೂ ಎಸಿಪಿ ಸತೀಶ್ ಕೆ.ಎಂ. ಅವರ ನೇತೃತ್ವದಲ್ಲಿ, ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್ ಅಜರುದ್ದೀನ್ ಮತ್ತು ಸಿಬ್ಬಂದಿಯ ಯಶಸ್ವಿ ಕಾರ್ಯಾಚರಣೆಯ ಮೂಲಕ ಯುಡಿಆರ್ ಪ್ರಕರಣವನ್ನು ಭೇದಿಸಿ, ಅದು ಕೊಲೆ ಪ್ರಕರಣವೆಂದು ಪತ್ತೆಹಚ್ಚಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಗಳನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಕರ್ತವ್ಯನಿಷ್ಠೆ, ಸಮಯೋಚಿತ ತನಿಖೆ ಹಾಗೂ ತಂಡದ ಕಾರ್ಯಕ್ಷಮತೆಗೆ ಅಭಿನಂದನೆಗಳು.
1
2
6
1,973
ಎಲೆಕ್ಟ್ರಾನಿಕ್ ಸಿಟಿ ವಿಭಾಗದ ಉಪ ಪೊಲೀಸ್ ಆಯುಕ್ತರಾದ ಶ್ರೀ ಎಂ. ನಾರಾಯಣ IPS ರವರು ಹೆಬ್ಬಗೋಡಿ ಪೊಲೀಸ್ ವಸತಿ ನಿಲಯದ ಬಳಿ ಪೊಲೀಸ್ ಸಿಬ್ಬಂದಿ ಹಾಗೂ ಅವರ ಕುಟುಂಬದ ಸದಸ್ಯರೊಂದಿಗೆ ದೀಪಾವಳಿ ಹಬ್ಬವನ್ನು ಸಂಭ್ರಮದಿಂದ ಆಚರಿಸಿದರು. ಈ ಸಂದರ್ಭದಲ್ಲಿ ಸಹಾಯಕ ಪೊಲೀಸ್ ಆಯುಕ್ತರಾದ ಶ್ರೀ ಸತೀಶ್ K.L. ಹಾಗೂ ಇತರೆ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು. ಎಲ್ಲರ ಜೀವನದಲ್ಲೂ ಸುಖ, ಶಾಂತಿ, ಸಮೃದ್ಧಿ ಹಾಗೂ ಸಂತೋಷದ ಬೆಳಕು ಸದಾ ಬೆಳಗಲಿ. ಎಲ್ಲರಿಗೂ ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯಗಳು! 🪔🎆
6
8
1,113
🪔 ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯಗಳು! 🪔 ಬೆಳಕಿನ ಹಬ್ಬ ದೀಪಾವಳಿಯು ಎಲ್ಲರ ಜೀವನದಲ್ಲಿ ಸುಖ, ಶಾಂತಿ, ಸಂತೋಷ ಮತ್ತು ಸಮೃದ್ಧಿಯನ್ನು ತರಲಿ. ಅಜ್ಞಾನವೆಂಬ ಕತ್ತಲೆ ದೂರವಾಗಿ, ಜ್ಞಾನದ ಬೆಳಕು ಪ್ರತಿಯೊಬ್ಬರ ಬದುಕಿನಲ್ಲಿ ಸದಾ ಬೆಳಗಲಿ. ಎಲ್ಲರಿಗೂ ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯಗಳು. ಸುರಕ್ಷಿತವಾಗಿ ದೀಪಾವಳಿ ಆಚರಿಸಿ.
1
133