ಸಮಸ್ತ ಭಾರತೀಯರಿಗೂ ಸಂವಿಧಾನ ದಿವಸದ ಹೃತ್ಪೂರ್ವಕ ಶುಭಾಶಯಗಳು.
#ConstitutionDay
ಹಿರಿಯರು ಹಾಗೂ ವಿಶ್ವ ಹಿಂದೂ ಪರಿಷತ್ ಬೆಂಗಳೂರು ಉತ್ತರದ ಅಧ್ಯಕ್ಷರಾಗಿದ್ದ ಶ್ರೀ ಬಿ.ಎಸ್. ನಾಗೇಂದ್ರ ರಾವ್ ಅವರ ನಿಧನದ ಸುದ್ದಿ ತಿಳಿದು ತೀವ್ರ ದುಃಖವಾಗಿದೆ.
ಮೃತರ ಆತ್ಮಕ್ಕೆ ಭಗವಂತನು ಚಿರಶಾಂತಿಯನ್ನು ಕರುಣಿಸಲಿ ಹಾಗೂ ಅವರ ಕುಟುಂಬದ ಸದಸ್ಯರು ಮತ್ತು ಅಭಿಮಾನಿಗಳಿಗೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುತ್ತೇನೆ.
ಓಂ ಶಾಂತಿ 🙏🏼
12ನೇ ಶತಮಾನದಲ್ಲಿಯೇ ಸಮಾನತೆ, ಸಾಮಾಜಿಕ ನ್ಯಾಯ, ಕಾಯಕ ಮತ್ತು ದಾಸೋಹದ ಮೂಲಕ ಮನುಕುಲಕ್ಕೆ ಹೊಸ ದಿಕ್ಕು ತೋರಿದ ವಿಶ್ವಗುರು ಅಣ್ಣ ಬಸವಣ್ಣನವರು ಕನ್ನಡ ನಾಡಿನ ಹೆಮ್ಮೆ ಮಾತ್ರವಲ್ಲ, ಇಡೀ ವಿಶ್ವದ ಮಾನವೀಯ ಮೌಲ್ಯಗಳ ಪ್ರತೀಕ. ಇತ್ತೀಚೆಗೆ ಕೃತಿಕಾರ ಶ್ರೀ ರವಿ ಹಂಜ್ ಅವರ “ಬಸವ ಮಂಟಪ” ಕೃತಿಯಲ್ಲಿ ಅಣ್ಣ ಬಸವಣ್ಣನವರ ಗೌರವ ಮತ್ತು ಚಿಂತನೆಗಳಿಗೆ ಧಕ್ಕೆ ತರುವಂತಹ ವಿಷಯಗಳನ್ನು ಉಲ್ಲೇಖಿಸಿರುವುದಾಗಿ ಹೇಳಲಾಗುತ್ತಿದ್ದು, ಜಗಜ್ಯೋತಿ ಬಸವೇಶ್ವರರ ಬಗ್ಗೆ ಯಾರೇ ಕೀಳಾಗಿ ಮಾತನಾಡಿದ್ದರೂ ಅದನ್ನು ಅತ್ಯಂತ ಕಟುವಾಗಿ ಮತ್ತು ತೀವ್ರವಾಗಿ ಖಂಡಿಸುತ್ತೇನೆ.
Congratulations to Team India on winning the #MensU19AsiaCup Final against Pakistan! Proud of our young players for this wonderful victory. Wishing the team many more wins ahead.
ಪಕ್ಷ ಸಂಘಟನೆ, ಮುಂಬರುವ ಜಿಲ್ಲಾ ಪಂಚಾಯ್ತಿ, ತಾಲೂಕ್ ಪಂಚಾಯ್ತಿ, ಉಪಚುನಾವಣೆ ಸೇರಿದಂತೆ ಹಲವಾರು ಮಹತ್ವದ ವಿಷಯಗಳ ಕುರಿತು ಸಮಾಲೋಚನೆ ನಡೆಸಲು ಇಂದು ರಾಜ್ಯ ಉಸ್ತುವಾರಿಗಳು ಮತ್ತು ರಾಜ್ಯಾಧ್ಯಕ್ಷರ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ನಡೆದ ರಾಜ್ಯ ಪ್ರಮುಖರ ವಿಶೇಷ ಸಭೆಯಲ್ಲಿ ಪಾಲ್ಗೊಳ್ಳಲಾಯಿತು.
@BJP4Karnataka
ರಾಜಧಾನಿ ಬೆಂಗಳೂರಿಗೆ ಇಂದು ಆಗಮಿಸಿದ ಆದರಣೀಯ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜೀ ಅವರನ್ನು ಹೆಚ್.ಎ.ಎಲ್ ವಿಮಾನ ನಿಲ್ದಾಣದಲ್ಲಿ ಸನ್ಮಾನ್ಯ ರಾಜ್ಯಪಾಲರಾದ ಶ್ರೀಮತಿ ಡಾ.ಸುಧಾ ಯಾದವ್, ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್, ಪಕ್ಷದ ರಾಜ್ಯಾಧ್ಯಕ್ಷ ಶ್ರೀ ಬಿ.ವೈ.ವಿಜಯೇಂದ್ರ ಮತ್ತಿತರ ಗಣ್ಯರೊಂದಿಗೆ ಆತ್ಮೀಯವಾಗಿ ಸ್ವಾಗತಿಸಲಾಯಿತು.
@narendramodi
ಈ ಭ್ರಷ್ಟ ಕಾಂಗ್ರೆಸ್ ಸರ್ಕಾರ ದುರಾಡಳಿತದ ಫಲವಾಗಿ ಅಗತ್ಯ ವಸ್ತುಗಳ ಬೆಲೆ ಏರಿಕೆಯ ಅತಿಯಾದ ಹೊರೆಯಿಂದ ರಾಜ್ಯದ ಜನತೆ ತೀವ್ರ ಸಂಕಷ್ಟ ಎದುರಿಸುತ್ತಿದ್ದು, ಈ ಜನವಿರೋಧಿ ಬೆಲೆ ಏರಿಕೆಯನ್ನು ಖಂಡಿಸಿ ಇಂದು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಪಕ್ಷದ ರಾಜ್ಯಾಧ್ಯಕ್ಷ ಶ್ರೀ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ಹಾಗೂ ಪಕ್ಷದ ಎಲ್ಲಾ ನಾಯಕರು, ಸಂಸದರು, ಶಾಸಕರು, ಮುಖಂಡರು ಮತ್ತು ಕಾರ್ಯಕರ್ತರೊಂದಿಗೆ ಬೃಹತ್ ಪ್ರತಿಭಟನೆ ನಡೆಸಲಾಯಿತು.
ಭಾರತ ರತ್ನ ಪುರಸ್ಕೃತರು, ಹಿರಿಯ ರಾಜಕೀಯ ಮುತ್ಸದ್ದಿ ಹಾಗೂ ಮಾಜಿ ಉಪ ಪ್ರಧಾನಮಂತ್ರಿಗಳಾದ ಶ್ರೀ ಎಲ್. ಕೆ. ಅಡ್ವಾಣಿ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು.
ಶಿಸ್ತು, ರಾಷ್ಟ್ರಪ್ರೇಮ ಹಾಗೂ ಸೇವಾ ಮನೋಭಾವದ ಸಂಕೇತವಾಗಿರುವ 'ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್ ಸಂಸ್ಥಾಪನಾ ದಿನ'ದ ಸಂದರ್ಭದಲ್ಲಿ ವಿಶೇಷ ಅಂಚೆ ಚೀಟಿ ಬಿಡುಗಡೆ ಮಾಡಲಾಯಿತು. ಸ್ಕೌಟ್ಸ್ ಆಂಡ್ ಗೈಡ್ಸ್ ನ ಸಮಸ್ತ ಸದಸ್ಯರಿಗೆ ಹಾಗೂ ಯುವ ಕೆಡೆಟ್ಸ್ ಗೆ ಸ್ಥಾಪನಾ ದಿನದ ಶುಭಾಶಯಗಳು. ಈ ಸಂದರ್ಭದಲ್ಲಿ ಮಾಜಿ ಸಚಿವರು ಮತ್ತು ಕರ್ನಾಟಕ ರಾಜ್ಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ರಾಜ್ಯ ಮುಖ್ಯ ಆಯುಕ್ತರಾದ ಶ್ರೀ ಡಾ ಪಿ.ಜಿ.ಆರ್. ಸಿಂಧ್ಯ ಮತ್ತಿತರ ಪ್ರಮುಖರು ಉಪಸ್ಥಿತರಿದ್ದರು
ಬಿಜೆಪಿ ರಾಜ್ಯಾಧ್ಯಕ್ಷರಾದ ಶ್ರೀ @BYVijayendra ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. ತಮಗೆ ಭಗವಂತನು ಉತ್ತಮ ಆರೋಗ್ಯ, ದೀರ್ಘಾಯುಷ್ಯ, ಜನಸೇವೆ ಸಲ್ಲಿಸುವ ಶಕ್ತಿ ದಯಪಾಲಿಸಲಿ ಎಂದು ಹಾರೈಸುವೆ.💐
ಬೆಂಗಳೂರಿನ ಲೋಕಭವನಕ್ಕೆ ಇಂದು ತೆರಳಿ ನಮ್ಮ ಘನತೆವೆತ್ತ ರಾಜ್ಯಪಾಲರಾದ ಡಾ. ಸುಧಾ ಯಾದವ್ ಜೀ ರವರನ್ನು ಸೌಹಾರ್ದಯುತವಾಗಿ ಭೇಟಿಯಾಗಿ, ದೀಪಾವಳಿ ಹಬ್ಬದ ಶುಭಾಶಯಗಳನ್ನು ಸಲ್ಲಿಸಲಾಯಿತು.
@drsudhayadav
ಬೆಂಗಳೂರಿನ ಪಕ್ಷದ ಕಾರ್ಯಾಲಯದಲ್ಲಿ ಇಂದು ನಡೆದ ಪಕ್ಷದ ಕೋರ್ ಕಮಿಟಿ ಸಭೆಯಲ್ಲಿ ಭಾಗವಹಿಸಲಾಯಿತು. ಪಕ್ಷದ ನೂತನ ರಾಜ್ಯ ಉಸ್ತುವಾರಿ, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಶ್ರೀ ಹರೀಶ್ ದ್ವಿವೇದಿ, ರಾಜ್ಯಾಧ್ಯಕ್ಷ ಶ್ರೀ ವಿಜಯೇಂದ್ರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ರಾಜ್ಯ ಕೋರ್ ಕಮಿಟಿ ಸದಸ್ಯರು ಪಾಲ್ಗೊಂಡಿದ್ದರು.
@HarishD_BJP
ದೇಶದ ಏಕತೆಗಾಗಿ ಶ್ರಮಿಸಿದ, ಉಕ್ಕಿನ ಮನುಷ್ಯ ಭಾರತ ರತ್ನ ಶ್ರೀ ಸರ್ದಾರ್ ವಲ್ಲಭಭಾಯ್ ಪಟೇಲ್ ಅವರ ಜಯಂತಿ ಹಾಗೂ ರಾಷ್ಟ್ರೀಯ ಏಕತಾ ದಿನದ ಶುಭಾಶಯಗಳು.































